Watch Video: ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕುಳಿತು ರೀಲ್ಸ್; ಯುವಕನಿಗೆ ಬರೋಬ್ಬರಿ 70 ಸಾವಿರ ರೂ. ದಂಡ

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್, ಲೈಕ್ಸ್ ಗಿಟ್ಟಿಸಿಕೊಳ್ಳಲು ಯುವಕ – ಯುವತಿಯರು ರೀಲ್ಸ್ ಮಾಡಿ ಹಂಚಿಕೊಳ್ಳಲು ಮುಂದಾಗುತ್ತಾರೆ. ಇದಕ್ಕಾಗಿ ಕೆಲವರು ತಮ್ಮ ಪ್ರಾಣವನ್ನು ಪಣಕ್ಕೊಡ್ಡುವುದರ ಜೊತೆಗೆ ಇತರೆಯವರಿಗೂ ಕಂಟಕ ಪ್ರಾಯರಾಗಿ ಪರಿಣಮಿಸುತ್ತಾರೆ.

ಇಂತಹ ಹಲವಾರು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಇದೀಗ ವೈರಲ್ ಆಗಿರುವ ಮತ್ತೊಂದು ವಿಡಿಯೋದಲ್ಲಿ ಯುವಕನೊಬ್ಬ ವೇಗವಾಗಿ ಚಲಿಸುತ್ತಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಾನೆಟ್ ಮೇಲೆ ಕುಳಿತು ರೆಕಾರ್ಡ್ ಮಾಡಲು ಮುಂದಾಗಿದ್ದಾನೆ.

ಈ ಯುವಕ ಬಾನೆಟ್ ಮೇಲೆ ಕುಳಿತು ಮೊಬೈಲ್ ಮೂಲಕ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರೆ ಮತ್ತೊಂದು ವಾಹನದಲ್ಲಿದ್ದವರು ಇದೆಲ್ಲವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಉತ್ಕರ್ಷ್ ಸೋಳಂಕಿ ಎಂಬ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಇದು ಶೇರ್ ಮಾಡಿದ ಬಳಿಕ ಪೊಲೀಸರು ಯುವಕನಿಗೆ ಬರೋಬ್ಬರಿ 70 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

https://youtu.be/jJc6AclM9-E

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read