ಬೆಂಗಳೂರು: ರಾಜಭವನದ ಮುಂದೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಪೊಲೀಸರಿಗೆ ದೂರು ನೀಡಲು ಮುಂದಾದರೂ ದೂರು ಸ್ವೀಕರಿಸದ ಕಾರಣಕ್ಕೆ ಮನನೊಂದ ವ್ಯಕ್ತಿ ರಾಜಭವನ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ನನ್ನ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ, ಸಾಯುವುದೊಂದೆ ದಾರಿ. ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ವ್ಯಕ್ತಿ ಆರೋಪಿಸಿದ್ದಾನೆ. ತಕ್ಷಣ ಪೊಲೀಸರು ವ್ಯಕ್ತಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.