ಓಟಿಪಿ ವಿಷಯದಲ್ಲಿ ವಿವಾದ: ಡೆಲಿವರಿ ಬಾಯ್‌ ಮೇಲೆ ಅಮಾನುಷ ಹಲ್ಲೆ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಸದಸ್ಯರೊಬ್ಬರು ಡೆಲಿವರಿ ಬಾಯ್ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ನಡೆದಿದೆ. ಇದರ ವಿಡಿಯೋ ವೈರಲ್‌ ಆಗಿದೆ.

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅಧಿಕಾರಿಗಳು ಶೀಘ್ರ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಓಟಿಪಿ (ಒನ್‌ ಟೈಂ ಪಾಸ್‌ವರ್ಡ್‌) ವಿಷಯದಲ್ಲಿ ವಾದ ವಿವಾದ ನಡೆದು ಈ ಘಟನೆ ನಡೆದಿದೆ ಎನ್ನಲಾಗಿದೆ. ಸೆಕ್ಟರ್ 99 ರ ವಸತಿ ಸಮುದಾಯದಲ್ಲಿ ರಸ್ತೆ ಮಧ್ಯದಲ್ಲಿ ಡೆಲಿವರಿ ಬಾಯ್ ಅನ್ನು ಥಳಿಸುವ 24 ಸೆಕೆಂಡುಗಳ ಭೀಕರ ವಿಡಿಯೋ ಇದಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲಾರಂಭಿಸಿದಾಗ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನೋಯ್ಡಾ ಪೊಲೀಸರು ಘಟನೆಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು ಮತ್ತು ಅಪರಾಧಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ವರದಿ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read