ಯುವತಿಯರೊಂದಿಗೆ ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ್ದ ಯುವಕ ಅರೆಸ್ಟ್

ಇಬ್ಬರು ಹುಡುಗಿಯರೊಂದಿಗೆ ಬೈಕ್ ನಲ್ಲಿ ಕುಳಿತು ಅಪಾಯಕಾರಿ ಸಾಹಸ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದಾರೆ.‌

ಆರೋಪಿಯ ವಿರುದ್ಧ ಆಂಟೋಪ್ ಹಿಲ್ ಮತ್ತು ವಡಾಲಾ ಟಿಟಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಇತ್ತೀಚೆಗೆ, ಆರೋಪಿ ಇಬ್ಬರು ಹುಡುಗಿಯರೊಂದಿಗೆ ತನ್ನ ಬೈಕ್‌ನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಘಟನೆಯು ನಗರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಪ್ರದೇಶದಲ್ಲಿ ಸಂಭವಿಸಿತ್ತು. ವೀಡಿಯೊ ವೈರಲ್ ಆದ ನಂತರ ಪ್ರಕರಣ ದಾಖಲಿಸಲಾಗಿತ್ತು. ಆತನನ್ನು ಬಂಧಿಸಲು ತಂಡವನ್ನು ರಚಿಸಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

ಪೋಲೀಸರ ಪ್ರಕಾರ ಆತನನ್ನು ಭಾರತೀಯ ದಂಡ ಸಂಹಿತೆಯ (IPC) 308 ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read