ಮತ್ತೊಂದು ಅಮಾನವೀಯ ಕೃತ್ಯ; ದಲಿತ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ

ಉತ್ತರ ಪ್ರದೇಶದ ಸೋನಭದ್ರಾದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರೋ ಘಟನೆ ವರದಿಯಾಗಿದೆ. ದಲಿತ ವ್ಯಕ್ತಿಯ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜುಲೈ 11 ರಂದು ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಘಟನೆ ನಡೆದಿದ್ದು. ಸ್ನೇಹಿತರಂತಿದ್ದ ಇಬ್ಬರು ಮದ್ಯಸೇವಿಸಿದ ನಂತರ ಯಾವುದೋ ವಿಚಾರಕ್ಕೆ ಜಗಳವಾಡಿಕೊಂಡಿದ್ದಾರೆ. ನಂತರ ಆರೋಪಿ ಜವಾಹರ್ ಪಟೇಲ್, ಗುಲಾಬ್ ಕೋಲ್ ಮೇಲೆ ಹಲ್ಲೆ ಹಲ್ಲೆ ಮಾಡಿ ಆತನ ಮೇಲೆ ಮೂತ್ರ ವಿಸರ್ಜಿಸಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಮುನ್ನೆಲೆಗೆ ಬಂದ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸ್ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಮದ್ಯದ ನಶೆಯಲ್ಲಿ ಕೃತ್ಯವೆಸಗಿದ ಬಗ್ಗೆ ಆರೋಪಿಗೆ ತಿಳಿದಿಲ್ಲ. ಆದರೆ ಘಟನೆಯ ವಿಡಿಯೋವನ್ನು ಯಾರೋ ಚಿತ್ರೀಕರಿಸಿ ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ.

ಈ ಸಂಬಂಧ ಗುಲಾಬ್ ಕೋಲ್ ದೂರು ದಾಖಲಿಸಿದ್ದು ಎಫ್‌ಐಆರ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ಸಂಬಂಧ ಆರೋಪಿ ಜವಾಹರ್ ಪಟೇಲ್ ಮತ್ತು ಆತನ ಸಹಚರನನ್ನು ಬಂಧಿಸಲಾಗಿದೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ದಶ್ಮತ್ ರಾವತ್ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಿದ ನಂತರ ಅದೇ ರೀತಿಯ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read