ಮಡಿಕೇರಿ: ಹಾಡಹಗಲೇ ಮಹಿಳೆಯರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಕಸಿದು ಪರಾರಿಯಾಗುತ್ತಿದ್ದ ಆರೋಪಿಯನ್ನು ಗ್ರಾಮಸ್ಥರೇ ಹಿಡಿದು ಥತಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊಡಗು ಜಿಲ್ಲೆ, ಮಡಿಕೇರಿ ತಾಲೂಕಿನ ಕೊಂಡಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಲಿಬೆಟ್ಟ ಗ್ರಾಮದ ಮುನಾವರ್ ಬಂಧಿತ ಆರೋಪಿಯಾಗಿದ್ದಾನೆ. ನೀರು ಕೇಳುವ ನೆಪದಲ್ಲಿ ಕೂಡಂಗೇರಿಯ ಸಾರಮ್ಮ ಮತ್ತು ಸಫಾನಾ ಅವರ ಮನೆಗೆ ಬಂದು ಹಲ್ಲೆ ನಡೆಸಿ ಚಿನ್ನದ ಸರ ಕಸಿದು ಪರಾರಿಯಾಗಿದ್ದಾನೆ.
ಗ್ರಾಮಸ್ಥರು ಆರೋಪಿಯನ್ನು ಹುಡುಕಿ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯರು ಮತ್ತು ಆರೋಪಿಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.