BIG NEWS: 87ನೇ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಡ್ಯ: ನಾಳೆ ಡಿಸೆಂಬರ್ 20 ರಿಂದ 22ರವರೆಗೆ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗಾಗಿ ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಡಿ.20ರಂದು ಮುಂಜಾನೆ 5 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗ ಬದಲಾವಣೆಯಾಗಲಿದೆ. ಬೆಂಗಳೂರು, ರಾಮನಗರ, ತುಮಕೂರು, ಮದ್ದೂರು, ಮಳವಳ್ಳಿಯಿಂದ ಎಕ್ಸ್ ಪ್ರೆಸ್ ವೇನಲ್ಲಿ ಬರುವವರಿಗೆ ಹೊಸಬೂದನೂರು ಬಳಿ ಎಕ್ಸಿಟ್ ಆಗಿ ಸರ್ವಿಸ್ ರಸ್ತೆ, ಸಮ್ಮೇಳನದ ಮುಖ್ಯ ದ್ವಾರದ ಮೂಲಕ ಬ್ಯಾಂಕರ್ಸ್ ಕಾಲೋನಿ ರಸ್ತೆ ಮೂಲಕ ಸಮ್ಮೇಳನ ಸ್ಥಳ ತಲುಪಬಹುದು.

ಮೈಸೂರು, ಶ್ರೀರಂಗಪಟ್ಟಣ, ಪಾಂಡವಪುರದಿಂದ ಎಕ್ಸ್ ಪ್ರೆಸ್ ವೇನಲ್ಲಿ ಬರುವವರು ಶಶಿಕಿರಣ ಕನ್ವೆನ್ ಷನ್ ಹಾಲ್ ಎದುರಿನಲ್ಲಿ ಎಕ್ಸಿಟ್ ಆಗಬೇಕು. ಸರ್ವಿಸ್ ರಸ್ತೆ ಮೂಲಕ ಹೊಸಬೂದನೂರು ಅಂಡರ್ ಪಾಸ್ ಮೂಲಕ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆ ಮೂಲಕ ಬ್ಯಾಂಕರ್ಸ್ ಕಾಲೋನಿ ಮೂಲಕ ಸಮ್ಮೇಳನ ಸ್ಥಳಕ್ಕೆ ಬರಬಹುದು.

ಇನ್ನು ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗಾಗಿ ಮಂಡ್ಯದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಡಲಾಗಿದೆ. ಸರ್ವಿಸ್ ರಸ್ತೆಗಳಲ್ಲಿ ದ್ವಿಮುಖ ಸಂಚಾರ ನಿರ್ಬಂಧಿಸಲಾಗಿದ್ದು, ಚಿಕ್ಕಮಂಡ್ಯದಿಂದ ಹನಕೆರೆವರೆಗಿನ ಎರಡೂ ಬದಿಯ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರ ನಿರ್ಬಂಧಿಸಲಾಗಿದೆ.

ಮದ್ದೂರು ಮತ್ತು ಶ್ರೀರಂಗಪಟ್ಟಣ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನಗಳು ಎಕ್ಸ್ ಪ್ರೆಸ್ ವೇನಲ್ಲಿ ತೆರಳಬಹುದು. ನಿರ್ಬಂಧಿತ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಸಂಚರಿಸಲು ಅವಕಾಶವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read