HomeKarnatakaBIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ

BIG NEWS: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಫ್ಯಾಕ್ಟರಿ

ಮಂಡ್ಯ: ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಹೊತ್ತಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಕ್ಟರಿ ಆವರಿಸಿದೆ.

ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular