HomeKarnatakaBREAKING NEWS: ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿ ಬಂಧನ

BREAKING NEWS: ಬಿಜೆಪಿ ಕಾರ್ಯಕರ್ತ ಡಣಾಯಕನಪುರ ರವಿ ಬಂಧನ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತಡಣಾಯಕನಪುರ ರವಿಯನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಮೂವರನ್ನು ಬಂಧಿಸಿರುವ ಬೆನ್ನಲ್ಲೇ ಇದೀಗ 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ 2022ರಲ್ಲಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಕಾರ್ಯಕರ್ತ ರವಿ ಗೊಂದಲದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಎರಡು ವರ್ಷಗಳ ಬಳಿಕ ಈ ಘಟನೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತ ಹನಿಂಬಾಡಿ ಕುಮಾರ್, ರವಿ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದರು. ಇದೀಗ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular