ಮಂಡ್ಯ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಚನ್ನೇಗೌಡ (60), ಸರೋಜಮ್ಮ (55) ಹಾಗೂ ಜಯಮ್ಮ (71) ಮೃತ ದುರ್ದೈವಿಗಳು
ಮೃತ ಮೂವರೂ ಚಿಕ್ಕಮಗಳೂರು ಮೂಲದವರಾಗಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತದೇಹಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
