HomeKarnatakaBREAKING: ನೀರಿನ ಸಂಪ್ ಗೆ ಬಿದ್ದು ಎರಡು ವರ್ಷದ ಮಗು ಸಾವು: ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

BREAKING: ನೀರಿನ ಸಂಪ್ ಗೆ ಬಿದ್ದು ಎರಡು ವರ್ಷದ ಮಗು ಸಾವು: ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

ಮಂಡ್ಯ: ಮನೆ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ನೀರಿನ ಸಂಪ್‌ಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular