Kaveri Water Dispute : ನಾಳೆ ‘ಮಂಡ್ಯ’ ನಗರ ಬಂದ್ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಡ್ಯ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಖಂಡಿಸಿ ರಾಜ್ಯದ ಹಲವು ಪ್ರತಿಭಟನೆ ಭುಗಿಲೆದ್ದಿದೆ. ಈ ಹಿನ್ನೆಲೆ ಸೆ.23 ರಂದು ನಾಳೆ ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ನಿನ್ನೆ ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಆದೇಶ ನೀಡಿದೆ. ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದ ವಿವಿಧ ಕಡೆ ರೈತರು, ಕನ್ನಡ ಪರ ಸಂಘಟನೆ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ರೈತ ಹಿತ ರಕ್ಷಣಾ ಸಮಿತಿ ಹಾಗೂ ಕನ್ನಡ ಪರ ಸಂಘಟನೆಗಳು (ನಾಳೆ) ಸೆ.23 ರಂದು ಮಂಡ್ಯ ಬಂದ್ ಗೆ ಕರೆ ನೀಡಿದೆ.

ಮಂಡ್ಯದಲ್ಲಿ ಬಂದ್ ಇರುವ ಹಿನ್ನೆಲೆ ನಗರದಾದ್ಯಂತ ಏನಿರುತ್ತೆ? ಏನಿರಲ್ಲ? ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯಿಂದ ನಗರ ಬಂದ್ಗೆ ಕರೆ ನೀಡಿದ್ದು, ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿದೆ. ಮಂಡ್ಯ ನಗರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ ವೃತ್ತ, ಮಹಾವೀರ ವೃತ್ತ, ವಿವಿ ರೋಡ್, ಡಬಲ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ.

ಮಂಡ್ಯ ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಲಿದೆ, ಸರ್ಕಾರಿ ಕಚೇರಿ ಬಂದ್ ಮಾಡುವಂತೆ ಮನವಿ ಮಾಡಲಾಗಿದೆ. ಆಟೋ ಸಂಚಾರ, ಖಾಸಗಿ ಬಸ್ ಸಂಚಾರ ನಡೆಸದಂತೆ, ಶಾಲಾ-ಕಾಲೇಜುಗಳನ್ನು ತೆರೆಯದಂತೆ ಮನವಿ ಮಾಡಲಾಗಿದೆ. ಮೆಡಿಕಲ್, ಆಸ್ಪತ್ರೆ, ಹಾಲಿನ ಬೂತ್ ಮಾತ್ರ ತೆರೆದಿರಲಿದೆ.ನಗರದಲ್ಲಿನ ಪರಿಸ್ಥಿತಿ ನೋಡಿಕೊಂಡು KSRTC   ಬಸ್ ಸಂಚಾರ ನಡೆಸಲು ನಿರ್ಧರಿಸಲಾಗಿದೆ.

ಬಂದ್ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದ್ದು, ಪ್ರತಿಭಟನೆ ಮಾಡುವುದು ಅವರ ಹಕ್ಕು, ನಮ್ಮ ತಕರಾರಿಲ್ಲ. ರಾಜ್ಯದ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿಭಟನೆ ಮಾಡಬಹುದು. ಆದರೆ ಯಾವುದೇ ರೀತಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವುಂಟಾಗುವಂತೆ ನಡೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಕಾನೂನು ಬಾಹಿರವಾದ ಯಾವುದೇ ಚಟುವಟಿಕೆ ಮಾಡಬಾರದು.. ಒಂದು ವೇಳೆ ಇಂತಹ ಘಟನೆ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ವಿವಿಧೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಸರ್ಕಾರದ ವಿರುದ್ಧ ಬಿಜೆಪಿ ‘ಕಾವೇರಿ’ ಕದನ

ಕೇಂದ್ರದಲ್ಲಾಗಲಿ ಅಥವಾ ರಾಜ್ಯದಲ್ಲಾಗಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೆಲ್ಲಾ ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ ಎಂಬುದು ಕಟ್ಟಿಟ್ಟ ಬುತ್ತಿ. ತಮಿಳುನಾಡಿನಲ್ಲಿ ರಚನೆಯಾಗುವ ಸರ್ಕಾರಗಳ ಜೊತೆ ಒಂದಲ್ಲ ಒಂದು ರೀತಿ ಮೈತ್ರಿ ಮಾಡಿಕೊಳ್ಳುತ್ತಿದ್ದ ಕಾಂಗ್ರೆಸ್, ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ದ್ರೋಹವನ್ನು ಎಸಗಿದೆ. ವಿಪಕ್ಷದಲ್ಲಿದ್ದಾಗ ಕಾವೇರಿಯನ್ನು ಚುನಾವಣೆಯ ವಿಷಯವನ್ನಾಗಿ, ಕನ್ನಡದ ಅಸ್ಮಿತೆಯನ್ನಾಗಿ ಬಳಸಿಕೊಳ್ಳುವ ಕಾಂಗ್ರೆಸ್ ಅಧಿಕಾರ ದೊರೆತ ತಕ್ಷಣ ಕಾವೇರಿಯನ್ನು ಹಾಗೂ ಕಾವೇರಿ ಕೊಳ್ಳದ ಭಾಗದ ಜನರ ಹಿತಾಸಕ್ತಿಯನ್ನು ಸಂಪೂರ್ಣ ಕಡೆಗಣಿಸುತ್ತದೆ ಎಂದು ಬಿಜೆಪಿ ಆರೋಪಿಸಿದೆ.

ಅವಕಾಶ ಸಿಕ್ಕಾಗಲೆಲ್ಲಾ ಬಿಟ್ಟಿ ಪ್ರಚಾರಕ್ಕೆ ಹವಣಿಸುವ ವ್ಯಕ್ತಿ ನಮ್ಮ ರಾಜ್ಯದ ಜಲ ಸಂಪನ್ಮೂಲ ಸಚಿವ. ಮಳೆಯ ಕೊರತೆ ಉಂಟಾದ ತಕ್ಷಣವೇ ಕಾವೇರಿ ನದಿ ನೀರು ಹಂಚಿಕೆ ಹಾಗೂ ವಿವಾದದ ಬಗ್ಗೆ ತಜ್ಞರ ಮಾಹಿತಿ ಪಡೆದು ಆ ನಿಟ್ಟಿನಲ್ಲಿ ಮುಂದುವರೆಯಬೇಕಿತ್ತು. ಆದರೆ ನೇಮು ಹಾಗೂ ಫೇಮಿಗೆ ಸದಾ ಹಪಹಪಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುವ ನಾಟಕ ಮಾಡಿದರೇ ಹೊರತು, ತಮ್ಮ ಆಪ್ತ ಗೆಳೆಯ ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್ರವರ ಜೊತೆ ಚರ್ಚಿಸಲೇ ಇಲ್ಲ. ಚುನಾವಣೆಯ ಸೀಟು ಹಂಚಿಕೆ ಬಗ್ಗೆ, ಚುನಾವಣೆಯ ಕಾರ್ಯಸೂಚಿಗಳ ಬಗ್ಗೆ ಎಂ.ಕೆ. ಸ್ಟಾಲಿನ್ರವರ ಹೆಗಲ ಮೇಲೆ ಕೈ ಹಾಕಿ ಚರ್ಚಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ರವರು, ಕರ್ನಾಟಕದ ವಾಸ್ತವದ ಪರಿಸ್ಥಿತಿಯನ್ನು ಏಕೆ ತಿಳಿಸಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಲಭಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.

https://twitter.com/BJP4Karnataka/status/1705168161786794076

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read