ಸಾಹಿತ್ಯ ಸಮ್ಮೇಳನ ವೇದಿಕೆ ದುರುಪಯೋಗಪಡಿಸಿಕೊಂಡು ಸಿಎಂ ರಾಜಕೀಯ ಭಾಷಣ: ಬಿಜೆಪಿ ಅರೋಪ

ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಂಪರೆ, ಕನ್ನಡದ ಮಹತ್ವ, ಕನ್ನಡದ ಬೆಳವಣಿಗೆ, ಕನ್ನಡದ ಆಸ್ಮಿತೆಯ ಕುರಿತು ಚರ್ಚೆ ಆಗಬೇಕಾಗಿತ್ತು. ಆದರೆ, ಭ್ರಷ್ಟ ಸಿಎಂ ಸಿದ್ಧರಾಮಯ್ಯ ಅವರು ತಮ್ಮ ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ. ಕರ್ನಾಟಕಕ್ಕಿಂತ ಕೇರಳದ ಮೇಲೆ ಪ್ರೀತಿ ಮಮಕಾರ ತೋರುವ ಸಿದ್ದರಾಮಯ್ಯನವರು, ಸಾಹಿತ್ಯ ಸಮ್ಮೇಳನದ ವೇದಿಕೆಗೆ ಕನ್ನ ಹಾಕಿ ದ್ರೋಹ ಮಾಡಿದ್ದಾರೆ. IPC 420 A1 ಭ್ರಷ್ಟ ಮುಖ್ಯಮಂತ್ರಿಗಳೇ, ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು  ದುರುಪಯೋಗ ಪಡಿಸಿಕೊಂಡು ಕನ್ನಡಕ್ಕೆ ಅವಮಾನ ಮಾಡಿದ್ದಿರಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read