ಮಂಡ್ಯ: ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಪತಿ ಪಾರಣಾಅಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪತಿ ಶ್ರೀಕಾಂತ್ ಸೇರಿದಂತೆ 9 ಜನರ ವಿರುದ್ಧ ಶ್ರೀರಂಗಪಟ್ಟಣ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪತ್ನಿ ಲಕ್ಷ್ಮೀ, ಅತ್ತೆ ಶ್ರುತಿ ಇಬ್ಬರನ್ನು ಮತಾತಂತರವಾಗುವಂತೆ ಪತಿ ಶ್ರೀಕಾಂತ್ ಸೇರಿ ಹಲವರು ಬಲವಂತ ಮಾಡುತ್ತಿದ್ದರು. ಒಪ್ಪದಿದ್ದಾಗ ಹಲ್ಲೆ ನಡೆಸಲಾಗಿದೆ.
ಪತಿ ಶ್ರೀಕಾಂತ್ ಪತ್ನಿ ಹಾಗೂ ಅತ್ತೆಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು. ಇದಕ್ಕೆ ಪತ್ನಿ ಹಾಗೂ ಅತ್ತೆ ನಿರಾಕರಿಸಿದಾಗ ಶ್ರೀಕಾಂತ್ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀ ಸಹೋದರ ನೀಡಿದ ದೂರುನ ಹಿನ್ನೆಲೆಯಲ್ಲಿ ಪತಿ ಶ್ರೀಕಾಂತ್ ಹಾಗೂ ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.