ಮಂಡ್ಯ: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದ್ದು, ಮಂಡ್ಯ ಜಿಲ್ಲೆಗೂ ಕೋವಿಡ್ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.
ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ವೃದ್ಧೆಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಮನೆಯಲ್ಲಿಯೇ ಇದ್ದ ವೃದ್ಧೆ ಎರಡು ದಿನಗಳಿಂದ ತೀವ್ರ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 
			 
		 
		 
		 
		 Loading ...
 Loading ... 
		 
		 
		