ಮಂಡ್ಯ: ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಡಳಿತ ಮಂಡಳಿಯವರೇ ನೌಕರರ ಖಾತೆಗೆ ಕನ್ನ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಎಲ್ಲಾ ನೌಕರರಿಗೂ 2017ರಲ್ಲಿ ಅರಿಯರ್ಸ್ ಬಿಡುಗಡೆಯಾಗಿತ್ತು. ಆಡಳಿತ ಮಂಡಳಿಯವರು ಪ್ರತಿ ನೌಕರರ 9 ತಿಂಗಳ ಅರಿಯರ್ಸ್ ಹಣವನ್ನು ಲಂಚವಾಗಿ ವಸೂಲಿ ಮಾಡಿದ್ದಾರೆ. ಬ್ಯಾಂಕ್ ನ 400 ನೌಕರರ ತಲಾ 78,264 ರೂ.ನಲ್ಲಿ 53,784 ರೂ ಲಂಚ ಪಡೆದಿದ್ದಾರೆ. ಪ್ರತಿ ನೌಕರರ ಖಾತೆಗೆ ಡೆಪಾಸಿಟ್ ಆದ ದಿನವೇ ಸೆಲ್ಫ್ ಡ್ರಾ ಮೂಲಕ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಬ್ಯಾಂಕ್ ನೌಕರರು ಈ ಹಿಂದೆಯೇ ಆರೋಪ ಮಾಡಿದ್ದರು. ಹೀಗೆ ಆರೋಪ ಮಾಡಿದವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು, ಇಲ್ಲವೇ ದೂರಕ್ಕೆ ವರ್ಗಾವಣೆ ಮಾಡುವುದು, ಅಮಾನತು ಮಡುವುದು ಮಾಡುತ್ತಿದ್ದರು. ಆದರೆ ಇದ್ಯಾವುದಕ್ಕೂ ಬಗ್ಗದ ಇಬ್ಬರು ಬ್ಯಾಂಕ್ ನೌಕರರು ಸಿಡಿದೆದುಇದ್ದರು. ಅವರನ್ನು ಅಮಾನತು ಮ್ಮಡಿ ಆದೇಶ ಹೊರಡಿಸಲಾಗಿದೆ. ಉಳಿದ ನೌಕರರು ಅನಿವಾರ್ಯವಾಗಿ ಕೆಲಸ ಮಾಡುತ್ತಿದ್ದಾರೆ. ಹಗರಣದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡವೂ ಇದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ಬಗ್ಗೆ ತನಿಖೆಯಾಗಬೇಕು. ಇಲ್ಲವೇ ಲೋಕಾಯುಕ್ತ ದೂರು ನೀಡಿವುದಾಗಿ ಡಾ.ಹೆಚ್.ಎನ್.ರವೀಂದ್ರ ಆಗ್ರಹಿಸಿದ್ದಾರೆ.