HomeKarnatakaBREAKING: ಮಂಡ್ಯದಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಿಗೂಢ ಸಾವು

BREAKING: ಮಂಡ್ಯದಲ್ಲಿ ಘೋರ ದುರಂತ: ಒಂದೇ ಕುಟುಂಬದ ಮೂವರು ನಿಗೂಢ ಸಾವು

ಮಂಡ್ಯ: ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನೆಹರು ನಗರದಲ್ಲಿ ನಡೆದಿದೆ. ಮನೆಯಲ್ಲಿಯೇ ತಂದೆ, ತಾಯಿ ಹಾಗೂ ಮಗ ಶವವಾಗಿ ಪತ್ತೆಯಾಗಿದ್ದಾರೆ.

ತಾಯಿ ಜ್ಯೋತಿ, ಮಗ ಸಂತೋಷ್ ಹಾಗೂ ತಂದೆ ಪ್ರಭಾಕರ್ ಮೃತ ದುರ್ದೈವಿಗಳು. ನಿನ್ನೆ ರಾತ್ರಿ ತಾಯಿ ಹಾಗೂ ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇಂದು ಬೆಳಗಾಗುವಷ್ಟರಲ್ಲಿ ತಂದೆ ಪ್ರಭಾಕರ್ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿಂಗಳ ಹಿಂದಷ್ಟೇ ಮಗ ಸಂತೋಷ್ ಗೆ ಪ್ರಭಾಕರ್ ಮದುವೆ ಮಾಡಿದ್ದರು. ಮನೆಯಲ್ಲಿ ಸೊಸೆ ಕೂಡ ಇದ್ದರು. ಮನೆಯ ಮತ್ತೊಂದು ಭಾಗದಲ್ಲಿ ತಾಯಿ ಜ್ಯೋತಿ ಹಾಗೂ ಮಗ ಸಂತೋಷ್ ಸಾವನ್ನಪ್ಪಿದ್ದರೆ, ಇನ್ನೊಂದು ಕೋಣೆಯಲ್ಲಿ ಪ್ರಭಾಕರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಪ್ರಭಾಕರ್, ತನ್ನ ಬಟ್ಟೆ ಅಂಗಡಿ ತುಂಬಾ ನಷ್ಟದಲ್ಲಿ ನಡೆಯುತ್ತಿತ್ತು. ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದ್ದರಿಂದ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾರೆ. ಆದರೆ ಮಗನ ಸಾವಿನ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಪ್ರಭಾಕರ್ ತನ್ನ ಪತ್ನಿ ಹಾಗೂ ಮಗನನ್ನು ಕೊಲೆಗೈದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular