HomeKarnatakaBIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

BIG BREAKING: ಮಂಡ್ಯ ವಿಸಿ ನಾಲೆಗೆ ಕಾರ್ ಬಿದ್ದು ಘೋರ ದುರಂತ: ಐವರು ಜಲ ಸಮಾಧಿ

ಮಂಡ್ಯ: ವಿಸಿ ನಾಲೆಗೆ ಬಿದ್ದಿದ್ದ ಸ್ವಿಫ್ಟ್ ಕಾರ್ ನಲ್ಲಿ ಐವರು ಜಲ ಸಮಾಧಿಯಾಗಿದ್ದಾರೆ. ಬಿಳಿ ಬಣ್ಣದ ಸ್ವಿಫ್ಟ್ ಕಾರ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದೆ.

ಕ್ರೇನ್ ಮೂಲಕ ನಾಲೆಯಿಂದ ಕಾರ್ ಹೊರ ತೆಗೆಯಲಾಗಿದೆ. ರಸ್ತೆ ತಿರುವಿನಲ್ಲಿ ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರ್ ನಂತರ ವಿಸಿ ನಾಲೆಗೆ ಬಿದ್ದಿದೆ. ಪಾಂಡವಪುರದಿಂದ ನಾಗಮಂಗಲಕ್ಕೆ ಹೋಗುವ ವೇಳೆ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗ್ನಿಶಾಮಕದಳ ಸಿಬ್ಬಂದಿ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ನಡೆಸಿ ವಿಸಿ ನಾಲೆಯಿಂದ ಕಾರ್ ಹೊರ  ತೆಗೆದಿದ್ದಾರೆ. ಕಾರ್ ನಲ್ಲಿ ಐವರ ಮೃತದೇಹ ಪತ್ತೆಯಾಗಿವೆ.

ಮಂಡ್ಯ ಜಿಲ್ಲೆ ಪಾಂಡವಪುರ ಸಮೀಪದ ಬನಘಟ್ಟದಲ್ಲಿ ದುರಂತ ಸಂಭವಿಸಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular