HomeKarnatakaBREAKING NEWS: ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೂವರು ಅರೆಸ್ಟ್

BREAKING NEWS: ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣ: ಮೂವರು ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇನ್ನೂ ಹೆಣ್ಣುಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ನಿಂತಿಲ್ಲ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ತೋಟದ ಮನೆಯಲ್ಲಿ ಭೂಣಲಿಂಗ ಪತ್ತೆ ಮಾಡುತ್ತಿದ್ದ ವೇಳೆಯೇ ಡಿಹೆಚ್ ಒ ಡಾ.ಮೋಹನ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಲ್ಲದೇ ಭೂಣಲಿಂಗ ಪತ್ತೆಗಾಗಿ ಕರೆತರಲಾಗಿದ್ದ ಹಾಸನ ಮೂಲದ ಗರ್ಭಿಣಿಯನ್ನು ರಕ್ಷಿಸಲಾಗಿದೆ.

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಮನೆಯ ಮಾಲೀಕ ಧನಂಜಯ್, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆ ಹಾಗೂ ಗರ್ಭಿಣಿಯ ಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಭೂಣ ಪತ್ತೆ ಕೇಂದ್ರವನ್ನು ಸೀಜ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular