HomeKarnatakaನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ್  ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ. 29ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯ ಐದು ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಬೇಲೂರು, ಆಲೂರು, ಹಾಸನ, ಚನ್ನರಾಯಪಟ್ಟಣ, ಅರಕಲಗೂಡು ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಶಾಲೆಗಳಿಗೆ ರಜೆ ನೀಡಿ ಆಯಾ ಬಿಇಓಗಳು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಕರ್ನಾಟಕ ಬಂದ್ ಹಿನ್ನೆಲೆ ಶಾಲಾ-ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular