HomeKarnatakaBREAKING: ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಅಧಿಕ ಅರ್ಜಿ ಸ್ವೀಕಾರ

BREAKING: ಹೆಚ್.ಡಿ. ಕುಮಾರಸ್ವಾಮಿ ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಅಧಿಕ ಅರ್ಜಿ ಸ್ವೀಕಾರ

ಮಂಡ್ಯ: ಜನತಾ ದರ್ಶನದಲ್ಲಿ ಮೂರು ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಏಳು ಗಂಟೆಗಳ ಕಾಲ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದೇನೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಬಂದಿವೆ. ನಿವೇಶನ, ಮನೆ, ನಿರುದ್ಯೋಗ ಸಮಸ್ಯೆ ಬಗ್ಗೆಯೂ ಜನರಿಂದ ಮನವಿ ಸಲ್ಲಿಕೆಯಾಗಿವೆ. ವಿಕಲಚೇತನರ 40 ಅರ್ಜಿಗಳು ಬಂದಿವೆ. ಎಲೆಕ್ಟ್ರಿಕ್ ವೆಹಿಕಲ್ ಗೆ ಸಾಕಷ್ಟು ಬೇಡಿಕೆ ಇದೆ ಎಂದು ತಿಳಿಸಿದ್ದಾರೆ.

ಸಮುದಾಯದ ಬಗ್ಗೆ ಕೂಡ ಅರ್ಜಿ ಕೊಟ್ಟಿದ್ದಾರೆ. ಅರ್ಜಿಗಳನ್ನು ಬೇರ್ಪಡಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿದ್ದೇವೆ. ಈ ಬಗ್ಗೆ ಅಧಿಕಾರಿಗಳು ಮತ್ತು ನಾನು ಗಮನಹರಿಸುತ್ತೇವೆ. ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಎರಡರಿಂದ ಮೂರು ತಿಂಗಳು ಕಾಲಾವಕಾಶ ಬೇಕು. ನಾನು ಕೆಲಸ ಕೊಡಿಸುವ ಬಗ್ಗೆ ಅನೇಕರಿಗೆ ಭರವಸೆ ಇದೆ ಹೆಚ್.ಡಿ.ಕೆ. ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular