HomeKarnatakaಯಾರಿಗೆ ಮಂಡ್ಯ ಲೋಕಸಭೆ ಟಿಕೆಟ್…? ಜೆಡಿಎಸ್ ಸ್ಪರ್ಧೆ ನಡುವೆ ಕುತೂಹಲ ಮೂಡಿಸಿದ ಸುಮಲತಾ ನಡೆ

ಯಾರಿಗೆ ಮಂಡ್ಯ ಲೋಕಸಭೆ ಟಿಕೆಟ್…? ಜೆಡಿಎಸ್ ಸ್ಪರ್ಧೆ ನಡುವೆ ಕುತೂಹಲ ಮೂಡಿಸಿದ ಸುಮಲತಾ ನಡೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಂಸದೆ ಸುಮಲತಾ ಅಂಬರೀಶ್ ಪಟ್ಟು ಹಿಡಿದಿದ್ದು, ನವದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.

ಎರಡು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಸುಮಲತಾ ಬಿಜೆಪಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ. ಬಿಜೆಪಿಯನ್ನು ಬೆಂಬಲಿಸಿದ್ದೇನೆ, ನನಗೆ ಟಿಕೆಟ್ ನೀಡಬೇಕು ಎಂದು ಕೇಳುತ್ತಿದ್ದಾರೆ. ಅವರು ದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಈ ನಡುವೆ ಮಂಡ್ಯದಲ್ಲಿ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು ಅಭ್ಯರ್ಥಿಗಳಾಗಬಹುದು ಎಂದು ಹೇಳಲಾಗಿತ್ತಾದರೂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವುದು ಖಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಸುಮಲತಾ ಅಂಬರೀಶ್ ಪಟ್ಟು ಹಿಡಿದಿದ್ದು, ಅವರ ರಾಜಕೀಯ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular