ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಪಾಪಣ್ಣಾಚಾರಿ ಮೃತ ದುರ್ದೈವಿ. ಕಬಡ್ಡಿ ಪಂಡ್ಯಾವಳಿ ನೋಡಲು ಸಾವಿರಾರು ಜನರು ಆಗಮಿಸಿದ್ದರು. ಈ ವೇಳೆ ಪ್ರೇಕ್ಷಕರ ಗ್ಯಾಲರಿ ಏಕಾಏಕಿ ಕುಸಿದು ಬಿದ್ದಿದೆ. ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಗಾಯಾಳು 13 ಜನರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿಗೆ ಎಂದು ತಿಳಿದುಬಂದಿದೆ.