HomeUncategorizedಕಬಡ್ಡಿ ಪಂದ್ಯದ ವೇಳೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ: ಓರ್ವ ಸ್ಥಳದಲ್ಲೇ ಸಾವು

ಕಬಡ್ಡಿ ಪಂದ್ಯದ ವೇಳೆ ಕುಸಿದು ಬಿದ್ದ ಪ್ರೇಕ್ಷಕರ ಗ್ಯಾಲರಿ: ಓರ್ವ ಸ್ಥಳದಲ್ಲೇ ಸಾವು

ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿದು ಬಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ನಡೆದಿದೆ.

ಪಾಪಣ್ಣಾಚಾರಿ ಮೃತ ದುರ್ದೈವಿ. ಕಬಡ್ಡಿ ಪಂಡ್ಯಾವಳಿ ನೋಡಲು ಸಾವಿರಾರು ಜನರು ಆಗಮಿಸಿದ್ದರು. ಈ ವೇಳೆ ಪ್ರೇಕ್ಷಕರ ಗ್ಯಾಲರಿ ಏಕಾಏಕಿ ಕುಸಿದು ಬಿದ್ದಿದೆ. ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಗಾಯಾಳು 13 ಜನರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿಗೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular