BREAKING NEWS: ಹನುಮನ ಬೃಹತ್ ಧ್ವಜ ತೆರವಿಗೆ ಗ್ರಾಮಸ್ಥರ ವಿರೋಧ: ತೀವ್ರಗೊಂಡ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಮಂಡ್ಯ: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾಗಿದ್ದು, ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೆರಗೂಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಹನುಮ ಧ್ವಜ ಹಾರಾಡುತ್ತಿದ್ದು, ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜ ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಯತ್ನಿಸಿದರೂ ಸಾಧ್ಯವಾಗಿಲ್ಲ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು 144 ಸೆಕ್ಷನ್ ಜಾರಿ ಮಾಡಲಾಗಿದೆ.

ಈ ನಡುವೆ ಹಲವು ಹಿಂದೂ ಸಂಘಟನೆ ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read