HomeKarnatakaBIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ವಿಪಕ್ಷ ನಾಯಕ ಆರ್....

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರ ಪಾಲಾಗಬಹುದು? ಎಂಬ ಕುತೂಹಲ ಹೆಚ್ಚಿರುವಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಅಭ್ಯರ್ಥಿಯ ಬಗ್ಗೆ ಸುಳಿವು ನೀಡಿದ್ದಾರೆ.

ಮಂಡ್ಯ ಟಿಕೆಟ್ ಬಿಜೆಪಿ ಬೆಂಬಲಿಸಿರುವ ಸಂಸದೆ ಸುಮಲತಾ ಅವರಿಗಾ ಅಥವಾ ಎನ್ ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಾಲಾಗಲಿದೆಯಾ? ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆದಿರುವಾಗಲೇ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಆರ್.ಅಶೋಕ್ ಸುಳಿವು ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ.

ಈ ಮೂಲಕ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗುವ ಸಾಧ್ಯತೆ ದಟ್ಟವಾಗಿದೆ. ಇದೀಗ ಮಂಡ್ಯ ಸಂಸದೆ ಸುಮಲತಾ ಅವರ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular