HomeCrimeತೋಟದ ಮನೆಯಲ್ಲಿ ಘೋರ ಕೃತ್ಯ: ಅತ್ತಿಗೆ, ಅಣ್ಣನ ಮಗನ ಬರ್ಬರ ಹತ್ಯೆ

ತೋಟದ ಮನೆಯಲ್ಲಿ ಘೋರ ಕೃತ್ಯ: ಅತ್ತಿಗೆ, ಅಣ್ಣನ ಮಗನ ಬರ್ಬರ ಹತ್ಯೆ

ಮಂಡ್ಯ: ಆಸ್ತಿ ವಿಚಾರಕ್ಕೆ ಕುಡುಗೊಲಿನಿಂದ ಕೊಚ್ಚಿ ಅತ್ತಿಗೆ ಮತ್ತು ಅಣ್ಣನ ಮಗನನ್ನು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಿನ್ನೆ ಸಂಜೆ ನಡೆದಿದೆ.

ಸತೀಶ್ ಎಂಬಾತ ಕೃತ್ಯವೆಸಗಿದ ಆರೋಪಿ. ಅತ್ತಿಗೆ ಶಾಂತಮ್ಮ ಮತ್ತು ಅಣ್ಣನ ಮಗ ಯಶವಂತ ಅವರನ್ನು ಕೊಲೆ ಮಾಡಿದ್ದಾನೆನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಸಂಜೆ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಶಾಂತಮ್ಮ ಮತ್ತು ಯಶವಂತವರನ್ನು ಹತ್ಯೆ ಮಾಡಿದ್ದಾನೆ. ಕಂಠಪೂರ್ತಿ ಕುಡಿದು ಬಂದಿದ್ದ ಸತೀಶ್ ಅತ್ತಿಗೆ ಶಾಂತಮ್ಮನೊಂದಿಗೆ ಕಿರಿಕ್ ಮಾಡಿದ್ದ. ಮಾತಿಗೆ ಮಾತು ಬೆಳೆದು ಕುಡುಗೋಲಿನಿಂದ ದಾಳಿ ಮಾಡಿದ್ದಾನೆ. ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಆರೋಪಿ ಸತೀಶ್ ಶರಣಾಗಿದ್ದಾನೆ. ಆರೋಪಿ ಸತೀಶ್ ನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular