HomeKarnatakaBIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ...

BIG NEWS: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಬೆಳ್ಳಂಬೆಳಿಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟೆ ಹೊಡೆದು ಬಂಧಿಸಿರುವ ಘಟನೆ ಚಿಕ್ಕಮಲಗೂರು ಗ್ರಾಮದಲ್ಲಿ ನಡೆದಿದೆ.

ಮುತ್ತುರಾಜು ಅಲಿಯಾಸ್ ಡಕ್ಕ ಎಂಬ ರೌಡಿಶೀಟರ್ ಗುಂಡೇಟು ತಗುಲಿದವ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಡಕ್ಕನನ್ನು ಹಿಡಿಯಲು ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಗುಂಡಿನ ದಾಳಿ ನಡೆಸಿದ್ದಾರೆ.

ಆರೋಪಿ ಡಕ್ಕನನ್ನು ಹಿಡಿಯಲು ಹೋದಾಗ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದ. ಘಟನೆಯಲ್ಲಿ ಪೊಲೀಸ್ ಪೇದೆ ಸಿದ್ದರಾಜು ಗಾಯಗೊಂಡಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಶ್ರೀಧರ್ ಆರೋಪಿ ಡಕ್ಕನ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ರೌಡಿಶೀಟರ್ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಾಳು ಪೊಲಿಸ್ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular