ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲು ಬಸ್ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದ ಮೂರು ದಿನ 7 ತಾಲೂಕು ಕೇಂದ್ರಗಳಿಂದ ಸಮ್ಮೇಳನ ನಡೆಯುವ ಸ್ಥಳಕ್ಕೆ 15 ವಿಶೇಷ ವಾಹನ ಒಳಗೊಂಡಂತೆ 105 ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೈಸೂರು ಮತ್ತು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಮಂಡ್ಯ ನಗರದ ವಿವಿಧ ಸ್ಥಳಗಳಿಂದ ಸಮ್ಮೇಳನಕ್ಕೆ ಜನರನ್ನು ಕರೆ ತರಲು 15 ವಾಹನಗಳ ಸಾರಿಗೆ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧಡೆಯಿಂದ ವಾಹನಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read