ವರ್ಷಾಂತ್ಯಕ್ಕೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸಂಬಂಧಿಸಿದಂತೆ ಸಣ್ಣಪುಟ್ಟ ಸಮಸ್ಯೆಗಳಿದ್ದು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೊಂದಿಗೆ ಚರ್ಚಿಸಿ ಸಮ್ಮೇಳನ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದ್ದಾರೆ.

2023ರ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿತ್ತು. ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಲಾಗಿದ್ದು, 2024ರ ಫೆಬ್ರವರಿಯಲ್ಲಿ ಸಮ್ಮೇಳನ ನಡೆಸಲು ಅಧ್ಯಕ್ಷರು ಆಸಕ್ತಿ ಹೊಂದಿದ್ದರೂ ಸಾಧ್ಯವಾಗಿರಲಿಲ್ಲ. ಜೂನ್ 7ರಿಂದ 9 ರವರೆಗೆ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಈ ನಡುವೆ ಲೋಕಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗಿದ್ದರಿಂದ ನಿಗದಿತ ಅವಧಿಯಲ್ಲಿ ಸಮ್ಮೇಳನ ನಡೆಯಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಮ್ಮೇಳನ ದಿನಾಂಕ ಮುಂದೂಡಲ್ಪಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read