HomeKarnatakaಗಣೇಶ ಹಬ್ಬ ಹಿನ್ನೆಲೆ: ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ: ಮಂಡ್ಯ ಎಸ್...

ಗಣೇಶ ಹಬ್ಬ ಹಿನ್ನೆಲೆ: ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ: ಮಂಡ್ಯ ಎಸ್ ಪಿ ಶೋಭಾರಾಣಿ ಖಡಕ್ ಎಚ್ಚರಿಕೆ

ಮಂಡ್ಯ: ಗೌರಿ-ಗಣೇಶ ಹಬ್ಬಕ್ಕೆ ದಿನಗಳನೆ ಆರಂಭವಾಗಿದ್ದು, ಎಲ್ಲೆಡೆ ಬರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪೊಲೀಸ್ ಇಲಾಖೆ ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಪೊಲೀಸ್ ವರಿಷ್ಠಾಧಿಕಾರಿಗಳು ಶಾಂತಿ ಸಭೆಗಳನ್ನು ನಡೆಸಿ ಖಡಕ್ ಎಚ್ಚರಿಕೆಗಳನ್ನು ನೀಡುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿಯೂ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಸ್ ಪಿ ಶೋಭಾರಾಣಿ ಶಾಂತಿ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಾದ್ಯಂತ ಗಣೇಶ ಹಬ್ಬಕ್ಕೆ ಹೈ ಅಲರ್ಟ್ ಘೋಷಿಸಲಾಗಿದೆ. ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಗಣೇಶ ಮೂರ್ತಿಗಳನ್ನು ಕೂರಿಸುವವರು ಅನುಮತಿ ಪಡೆಯುವಂತೆ ಸೂಚನೆ ನೀಡಲಾಗಿದೆ.

2024ರಲ್ಲಿ ನಾಗಮಂಗಲ ಹಾಗೂ ಕಳೆದ ವರ್ಷ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಮೂರ್ತಿ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ್ದರು. ಈ ಘಟನೆಗಳಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಎಸ್​ಪಿ ಶೋಭಾರಾಣಿ, ಮದ್ದೂರಿನಲ್ಲಿ ಸಾರ್ವಜನಿಕರ ಹಾಗೂ ಮುಖಂಡರೊಂದಿಗೆ ಎರಡನೇ ಸುತ್ತಿನ ಶಾಂತಿ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಣೇಶ ಹಬ್ಬ ಹತ್ತಿರವಾಗುತ್ತಿದ್ದಂತೆ ಮಂಡ್ಯ ಪೊಲೀಸರು ಹೈ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಯಾಗದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಮಾಜಘಾತುಕ ಶಕ್ತಿಗಳ ಪ್ರತಿಯೊಂದು ಚಲನವಲನದ ಮೇಲೂ ನಿಗಾ ವಹಿಸಲಾಗುವುದು. ಡಿಜೆ ನಿಷೇಧ, ಎನ್​ಒಸಿ ಪ್ರಮಾಣಪತ್ರ, ಗಣೇಶ ಪ್ರತಿಷ್ಠಾಪನೆ ವೇಳೆ ಸಿಸಿ ಕ್ಯಾಮರಾಗಳ ಅಳವಡಿಸಿಕೆ ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಗಣೇಶ ಕೂರಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಲು ಪೊಲೀಸರು ಸೂಚಿಸಿದ್ದಾರೆ.

ಈ ಬಾರಿ ಅಪರಿಚಿತರು ಹಾಗೂ ಹೊರಗಿನ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಸದಾ ಜಾಗರೂಕರಾಗಿರಬೇಕು. ಹಬ್ಬವನ್ನು ಸೌಹಾರ್ದಯುತವಾಗಿ ಹಾಗೂ ಶಾಂತಿಯುತವಾಗಿ ಆಚರಿಸಬೇಕು. ಉತ್ಸವ ಸಮಿತಿಯವರು ಹಾಗೂ ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್​ಪಿ ಶೋಭಾರಾಣಿ ಖಡಕ್ ವಾಅರ್ನಿಂಗ್ ಕೊಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular