HomeKarnatakaಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದು ಕಾರ್ಮಿಕ ದುರ್ಮರಣ; ತೀವ್ರಗೊಂಡ ಪ್ರತಿಭಟನೆ

ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ ದುರಂತ: ಬಾಯ್ಲರ್ ಗೆ ಬಿದ್ದು ಕಾರ್ಮಿಕ ದುರ್ಮರಣ; ತೀವ್ರಗೊಂಡ ಪ್ರತಿಭಟನೆ

ಮಂಡ್ಯ: ಮಂಡ್ಯದ ಮೈಶುಗರ್ ಕಾರ್ಖಾನೆ ಬಾಯ್ಲರ್ ಗೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ದುರಂತದ ಬೆನ್ನಲ್ಲೇ ಕುಟುಂಬಸ್ಥರು ಕಾರ್ಖಾನೆ ಮುಂದು ಪ್ರತಿಭಟನೆ ನಡೆಸಿದ್ದಾರೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಯ್ಲರ್ ಗೆ ಬಿದ್ದು ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದ. ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂಬ ಆರೋಪಗಳು ಕೇಳಿಬಂದಿದ್ದು. ಚರಣ್ ಕುಮಾರ್ ಸಾವಿಗೆ ಆಡಳಿತ ಮಂಡಳಿಯೇ ಕಾರಣ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕಾರ್ಮಿಕರ ಸುರಕ್ಷತೆಗೆವ್ ಒತ್ತಾಯಿಸಿದ್ದಾರೆ. ಕಾರ್ಖಾನೆ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.

ಚರಣ್ ಕುಮಾರ್, ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಮೈಶುಗರ್ ಕಾರ್ಖಾನೆಯಲ್ಲಿ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

ರೀಲ್ಸ್ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೀಲ್ಸ್ ಹುಚ್ಚು ಯುವಜನತೆಯನ್ನು ಮಾತ್ರವಲ್ಲ ಹಿರಿಯರನ್ನೂ ಬಿಡುತ್ತಿಲ್ಲ. ಕೈಯಲ್ಲಿ ಮೊಬೈಲ್ ಸಿಕ್ಕರೆ ಸಾಕು ರೀಲ್ಸ್ ಮಾಡಿ ವಿಡಿಯೋ ಅಪ್ ಲೋಡ್ ಮಾಡುವುದರಲ್ಲಿ ಕಾಲ ಕಳೆಯುತ್ತಾರೆ. ಇಲ್ಲವೇ ಮೊಬೈಲ್ ನಲ್ಲಿ ರೀಲ್ಸ್ ನೋಡುವುದರಲ್ಲಿಯೇ ಮುಳುಗಿರುತ್ತಾರೆ. ಇದೇ ರೀತಿ ಮೊಬೈಲ್ ನಲ್ಲಿ ಪತ್ನಿ ರೀಲ್ಸ್ ನೋಡುತ್ತಾ ಕುಳಿತಿದ್ದಕ್ಕೆ ಕೋಪಗೊಂಡ ಪತಿ ಮಹಾಶಯ ಆಕೆಯನ್ನು ಹೊಡೆದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಚ್‌ಎಎಲ್‌ ನ ವಿಭೂತಿಪುರದಲ್ಲಿ ಈ ಘಟನೆ ನಡೆದಿದೆ. ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಕೊಲೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಘವೇಂದ್ರ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಶೃತಿ ಪತಿಯಿಂದಲೇ ಕೊಲೆಯಾದ ಪತ್ನಿ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ದಂಪತಿ ಇಬ್ಬರೇ ಮನೆಯಲ್ಲಿ ಇದ್ದರು. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿರುವ ಕಾರಣಕ್ಕೆ ಪತಿ ಜಗಳವಾಡಿದ್ದಾನೆ.

ಇಬ್ಬರ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿದೆ. ಪತಿ ರಾಘವೇಂದ್ರ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದಿದ್ದಾನೆ. ಗಂಭಿರವಾಗಿ ಹಲ್ಲೆಗೊಳಗಾದ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪತ್ನಿ ಸಾವನ್ನಪ್ಪುತ್ತಿದ್ದಂತೆ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೆಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular