HomeKarnatakaಮಂಡ್ಯ ಟೀ ಡೇಯಲ್ಲಿ ಭೀಕರ ಸಿಲಿಂಡರ್ ಸ್ಫೋಟ

ಮಂಡ್ಯ ಟೀ ಡೇಯಲ್ಲಿ ಭೀಕರ ಸಿಲಿಂಡರ್ ಸ್ಫೋಟ

ಮಂಡ್ಯ: ಮುಂಜಾನೆ ಟೀ ಡೇಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಮಂಡ್ಯದ ಅಶೋಕ ನಗರದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಗಿನ ಜಾವ 4.45ರ ಸುಮಾರಿಗೆ ಅಂಗಡಿಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿ, ಪೀಠೋಪಕರಣಗಳು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ತು ಭಸ್ಮವಾಗಿದೆ.

ರಾತ್ರಿ ಅಂಗಡಿ ಬಂದ್ ಮಾಡುವಾಗ ಸಿಲಿಂಡರ್ ವಾಲ್ವ್ ಆಫ್ ಮಾಡಲು ಮರೆತಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಾತ್ರಿಯಿಡೀ ಗ್ಯಾಸ್ ಸೋರಿಕೆಯಾಗಿದೆ. ಮುಂಜಾನೆ 4.45ರ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಟೀ ಸ್ಟಾಲ್‌ನಲ್ಲಿದ್ದ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ.

ಅಲ್ಲದೇ ಪಕ್ಕದಲ್ಲಿದ್ದ ಟೈಲ್ಸ್ ಅಂಗಡಿಗೂ ಬೆಂಕಿ ವ್ಯಾಪಿಸಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ರಾಮನಗರದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧಿ ಜಾಲ ಪತ್ತೆ: ಕೃಪಾ ಹೆಲ್ತ್‌ಕೇರ್‌ ಮಾಲೀಕ ವೀರೇಶ್‌ ಕುಮಾರ್‌ ಅರೆಸ್ಟ್

ಬೆಂಗಳೂರು: ರಾಮನಗರದ ಬಿಡದಿ ಹಾಗೂ ದೊಡ್ಡೇರಿ ಭಾಗದಲ್ಲಿ ನಕಲಿ ಔಷಧಿ ಜಾಅಲ ಪತ್ತೆಯಾಗಿರುವ ಬೆನ್ನಲ್ಲೇ ಎಸ್ಐಟಿ ತನಿಖೆ ವೇಳೆ ಇದೀಗ ಬೆಂಗಳೂರಿನಲ್ಲಿಯೂ ಅಂತದ್ದೇ ನಕಲಿ ಔಷಧ ಜಾಲ ಪತ್ತೆಯಾಗಿದೆ.

ಬೆಂಗಳೂರಿನ ಮಿನರ್ವ ಸರ್ಕಲ್ ನಲ್ಲಿರುವ ಕೃಪಾ ಹೆಲ್ತ್ ಕೇರ್ ಮೇಲೆ ಎಸ್ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿದ್ದು, ಈ ವೇಳೆ ಅಪಾರಪ್ರಮಾಣದ ನಕಲಿ ಔಷಧಿಗಳ ಸಂಗ್ರಹ ಪತ್ತೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಹೆಲ್ತ್‌ಕೇರ್‌ ಮಾಲೀಕ ವೀರೇಶ್‌ ಕುಮಾರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾನ್ಸರ್‌ ಮಾತ್ರೆಗಳು, ಜೀವ ರಕ್ಷಕ ಔಷಧಿಗಳು ಹಾಗೂ ಐಸಿಯುನಲ್ಲಿ ಬಳಸುವ ಇಂಜೆಕ್ಷನ್‌ಗಳನ್ನೂ ನಕಲಿ ಮಾಡಿ ಪೂರೈಕೆ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು, ಕ್ಲಿನಿಕ್‌ಗಳು ಹಾಗೂ ಮೆಡಿಕಲ್‌ ಶಾಪ್‌ಗಳಿಗೆ ಈ ಔಷಧಿಗಳನ್ನು ಸರಬರಾಜು ಮಾಡಲಾಗುತ್ತಿತ್ತು ಎಂದು ತನಿಖಾ ತಂಡ ಅನುಮಾನ ವ್ಯಕ್ತಪಡಿಸಿದೆ.

ಆಗಸ್ಟ್‌ 18ರಂದು ರಾಮನಗರದ ಬಿಡದಿ ಹಾಗೂ ದೊಡ್ಡೇರಿ ಭಾಗದಲ್ಲಿರುವ ಫಾರ್ಮ್‌ಹೌಸ್‌ವೊಂದರ ಮೇಲೆ ನಡೆದ ದಾಳಿಯ ವೇಳೆ ನಕಲಿ ಔಷಧ ಜಾಲದ ಸುಳಿವು ಮೊದಲ ಬಾರಿಗೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಸುಮಾರು ₹4.91 ಕೋಟಿಯಿಂದ ₹5 ಕೋಟಿ ಮೌಲ್ಯದ ನಕಲಿ ಔಷಧಿಗಳು, ನಕಲಿ ಬಿಲ್‌ಗಳು, ಇಂಜೆಕ್ಷನ್‌ ತುಂಬುವ ಯಂತ್ರಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಜಾಲ ರಾಜ್ಯದ ಹೊರಗೂ ವಿಸ್ತರಿಸಿರುವ ಅನುಮಾನ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆರು ರಾಜ್ಯಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಎಸ್ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಜಂಟಿ ಪೊಲೀಸ್‌ ಆಯುಕ್ತ ಸಿ. ವಂಶಿಕೃಷ್ಣ ಅವರ ನೇತೃತ್ವದ ಎಸ್‌ಐಟಿ ತಂಡ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ಕರ್ನಾಟಕ, ಹರಿಯಾಣ, ಹಿಮಾಚಲ ಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಸೇರಿದಂತೆ ಆರು ರಾಜ್ಯಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಈ ಕಾರ್ಯಾಚರಣೆಯ ಭಾಗವಾಗಿ ಬೆಂಗಳೂರಿನ ಮಿನರ್ವ್ ಸರ್ಕಲ್‌ನಲ್ಲಿರುವ ಕೃಪಾ ಹೆಲ್ತ್‌ಕೇರ್‌ ಕಚೇರಿ ಹಾಗೂ ಗೋಡೌನ್‌ ಮೇಲೂ ದಾಳಿ ನಡೆದಿದೆ. ವೀರೇಶ್‌ ಕುಮಾರ್‌ ಮನೆ ಮತ್ತು ಕಚೇರಿಗಳಲ್ಲಿಯೂ ಪರಿಶೀಲನೆ ನಡೆಸಲಾಗಿದೆ.

2021ರಲ್ಲಿ ಕೃಪಾ ಹೆಲ್ತ್‌ಕೇರ್‌ ಸಂಸ್ಥೆಯನ್ನು ಸ್ಥಾಪಿಸಿದ್ದ ವೀರೇಶ್‌ ಕುಮಾರ್‌, ನಕಲಿ ಔಷಧಿ ಜಾಲದ ಪ್ರಮುಖ ಆರೋಪಿ ಪ್ರಶಾಂತ್‌ ಹಾಗೂ ಆತನ ಸಹಚರರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ ಒಂದು ವರ್ಷದಿಂದ ವೀರೇಶ್‌ ಕುಮಾರ್‌ ಮತ್ತು ಪ್ರಶಾಂತ್‌ ಉದ್ಯಮದ ಪಾಲುದಾರಿಕೆಯನ್ನು ಹೊಂದಿದ್ದರು ಎಂಬ ಮಾಹಿತಿಯ ಆಧಾರದ ಮೇಲೆ ಎಸ್‌ಐಟಿ ತನಿಖೆ ನಡೆಸಿದೆ.

ಕೃಪಾ ಹೆಲ್ತ್‌ ಕೇರ್‌ ಮೇಲೆ ನಡೆದ ದಾಳಿಯಲ್ಲಿ ನಕಲಿ ಔಷಧಿಗಳ ಭಾರಿ ಸಂಗ್ರಹ ಪತ್ತೆಯಾಗಿದೆ. ಇದರೊಂದಿಗೆ ನಕಲಿ ಔಷಧಿಗಳ ಸಾಗಣೆ ಮತ್ತು ವಿತರಣೆಗೆ ಸಂಬಂಧಿಸಿದ ದಾಖಲೆಗಳು, ನಕಲಿ ಬಿಲ್‌ಗಳು ಹಾಗೂ ಇತರೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ನಕಲಿ ಔಷಧಿಗಳ ಬ್ಯಾಚ್‌ ಸಂಖ್ಯೆಗಳೂ ಪತ್ತೆಯಾಗಿದ್ದು, ಅವುಗಳ ಆಧಾರದ ಮೇಲೆ ಇನ್ನಷ್ಟು ಆಸ್ಪತ್ರೆಗಳು ಮತ್ತು ಮೆಡಿಕಲ್‌ ಶಾಪ್‌ಗಳಿಗೆ ಔಷಧಿ ಪೂರೈಕೆಯಾಗಿದೆಯೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ.

ಕಡಿಮೆ ಬೆಲೆಯ ರೀ-ಬ್ರ್ಯಾಂಡಿಂಗ್‌ ಔಷಧಿಗಳನ್ನು ಖರೀದಿಸಿ, ಅವುಗಳನ್ನು ಬೇರೆ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಅವಧಿ ಮುಗಿದ ಔಷಧಿಗಳನ್ನು ಸಂಗ್ರಹಿಸಿ, ಹೊಸ ಬಾಟಲಿಗಳಿಗೆ ತುಂಬಲಾಗುತ್ತಿತ್ತು. ಬಳಿಕ ನಕಲಿ ಲೇಬಲ್‌ಗಳು ಮತ್ತು ಪ್ಯಾಕಿಂಗ್‌ ಸಾಮಗ್ರಿಗಳನ್ನು ಬಳಸಿ ಮರುಪ್ಯಾಕ್‌ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಫೈಜರ್‌ನಂತಹ ಪ್ರತಿಷ್ಠಿತ ಕಂಪನಿಗಳ ಔಷಧಿಗಳಿಗೂ ನಕಲಿ ಲೇಬಲ್‌ಗಳನ್ನು ಅಂಟಿಸಲಾಗುತ್ತಿತ್ತು. ಇಂತಹ ಔಷಧಿಗಳು ಮಿನರ್ವ್ ಸರ್ಕಲ್‌ನಲ್ಲಿರುವ ಗೋಡೌನ್‌ಗೆ ಬರುತ್ತಿದ್ದವು. ಅಲ್ಲಿಂದ ಬೆಂಗಳೂರು ಸುತ್ತಮುತ್ತಲಿನ ಆಸ್ಪತ್ರೆಗಳು, ಕ್ಲಿನಿಕ್‌ಗಳು ಹಾಗೂ ಮೆಡಿಕಲ್‌ ಶಾಪ್‌ಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular