HomeKarnatakaಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಕಲುಷಿತ ನೀರು ಸೇವಿಸಿ ಮಹಿಳೆಯರಿಬ್ಬರು ಸಾವು

ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯಾಗಿ ತೀವ್ರ ಅಸ್ವಸ್ಥರಾಗಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 12 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಭಾರತಿಪುರ ಕ್ರಾಸ್ ಗ್ರಾಪಂ ವ್ಯಾಪ್ತಿಯ ಮಾರನಹಳ್ಳಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲುಷಿತ ನೀರು ಸೇವನೆಯಿಂದ ಮಹಿಳೆಯರು ಮೃತಪಟ್ಟಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ ತಾಲೂಕು ಆರೋಗ್ಯ ಅಧಿಕಾರಿಗಳು ಇದನ್ನು ತಳ್ಳಿ ಹಾಕಿದ್ದಾರೆ.

ಜವರಮ್ಮ(90), ಚಿಕ್ಕಮ್ಮ(75) ವಾಂತಿ ಭೇದಿಯಿಂದ ಅಸ್ವಸ್ಥರಾಗಿ ಮೃತಪಟ್ಟವರು. ಮಾಕಮ್ಮ(60), ನಿಂಗೇಗೌಡ(70), ಸಣ್ಣಮ್ಮ(50) ಹಾಗೂ ಮತ್ತಿಬ್ಬರು ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕೊಳವೆ ಬಾವಿ ಮೂಲಕ ನೀರು ಸರಬರಾಜಾಗುತ್ತಿದ್ದು, ಯಾವುದೇ ಸಮಸ್ಯೆ ಇಲ್ಲ. ಆದರೆ ಘಟಕದ ಮೂಲಕ ಪೂರೈಕೆ ಆಗುತ್ತಿರುವ ನೀರು ಕುಡಿದ ಗ್ರಾಮಸ್ಥರು ವಾಂತಿ ಭೇದಿಗೆ ತುತ್ತಾಗಿದ್ದಾರೆ. ಈ ನೀರು ಕೂಡ ಕುಡಿಯಲು ಯೋಗ್ಯವಾಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular