ಮಂಡ್ಯ: ಮಂಡ್ಯ ಜಿಲ್ಲೆಯ ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿ.ಸಿ.ನಾಲೆಯಲ್ಲಿ ಪತ್ತೆಯಾದ ಕಾರಿನಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಶವವಾಗಿ ಸಿಕ್ಕಿದ್ದಾರೆ.
ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ.

ಏ.16 ರಂದು ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.
ಕಾರು ಹಾಗೂ ಮೃತದೇಹಗಳನ್ನು ಮೇಲಕೆತ್ತಲಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಬಳಿಕವಷ್ಟೇ ತಿಳಿಯಬೇಕಾಗಿದೆ.