HomeJobsಮಂಡ್ಯ: ಮಾರ್ಚ್ 6ರಂದು ನೇರ ಸಂದರ್ಶನ, ಹುದ್ದೆ, ವೇತನ ವಿವರ

ಮಂಡ್ಯ: ಮಾರ್ಚ್ 6ರಂದು ನೇರ ಸಂದರ್ಶನ, ಹುದ್ದೆ, ವೇತನ ವಿವರ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ ಮಂಡ್ಯ ವತಿಯಿಂದ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಬಂಧನ್ ಬ್ಯಾಂಕ್, ಮಂಡ್ಯ ತಮ್ಮಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇದಕ್ಕಾಗಿ ನೇರ ಸಂದರ್ಶನವನ್ನು ಮಾರ್ಚ್ 6, 2026ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಿದ್ದಾರೆ.

ಹುದ್ದೆಗಳ ವಿವರ: ಒಟ್ಟು 200 ಹುದ್ದೆಗಳ ಭರ್ತಿಯಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಇದರಲ್ಲಿ ಕಲೆಕ್ಷನ್ ಆಫೀಸರ್, ಕಲೆಕ್ಷನ್ ಎಕ್ಸಿಕ್ಯುಟಿವ್, ರಿಲೇಷನ್‌ಷಿಪ್ ಆಫೀಸರ್ಸ್, ರಿಲೇಷನ್‌ಷಿಪ್ ಎಕ್ಸಿಕ್ಯುಟಿವ್ ಹುದ್ದೆಗಳು ಸೇರಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲೆಕ್ಷನ್ ಆಫೀಸರ್ 50, ಕಲೆಕ್ಷನ್ ಎಕ್ಸಿಕ್ಯುಟಿವ್ 50, ರಿಲೇಷನ್‌ಷಿಪ್ ಆಫೀಸರ್ಸ್ 50, ರಿಲೇಷನ್‌ಷಿಪ್ ಎಕ್ಸಿಕ್ಯುಟಿವ್ 50 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಎಲ್ಲಾ ಹುದ್ದೆಗಳಿಗೆ ವೇತನ 18,000 ರೂ. ಮತ್ತು ಭತ್ಯೆಗಳು.

ನೇರ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣರಾಗಿರಬೇಕು. 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ನೇರ ಸಂದರ್ಶನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಡ್ಯ ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9164642684, 9741939716 ಸಂಖ್ಯೆಗೆ ಸಂಪರ್ಕಿಸಬಹುದು.

ನೇರ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರ/ ರೆಸ್ಯೂಮ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular