HomeLive Newsಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಿಗೆ ಹೋಗುವ ಪ್ಲಾನ್ ಇದ್ದರೆ ಬಲಮುರಿ ಹಾಗೂ ಎಡಮುರಿ ತಾಣಗಳ ಬಗ್ಗೆ ಗಮನವಿರಲಿ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಸಂಪೂರ್ಣವಾಗಿ ನಿಷೇಧ ಹೇರಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ಪ್ರವಾಸಿಗರು ಮೃತಪಟ್ಟಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ 80ಕ್ಕೂ ಹೆಚ್ಚು ಜನರು ಇಲ್ಲಿ ಜೀವ ಕಳೆದುಕೊಂಡಿದ್ದಾರೆ. ಈಗ ಬೇಸಿಗೆ ರಜೆ ಇರುವ ಕಾರಣ ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಹಿನ್ನೆಲೆ, ಮುಂಜಾಗೃತಾ ಕ್ರಮವಾಗಿ ಮಂಡ್ಯ ಜಿಲ್ಲಾಡಳಿತವು ಮುಂದಿನ ಆದೇಶದವರೆಗೆ ಬಲಮುರಿ ಮತ್ತು ಎಡಮುರಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾರೂ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular