ಮಂಗಳೂರು: ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಸಂಚಾರ ಬಂದ್ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿಪಡೆದ ಕೃತ್ಯಕ್ಕೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಹಾರಾಟ ನಿರ್ಬಂಧಿಸಲಾಗಿದೆ. ಅಲ್ಲದೇ ಹಲವು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ಹಾರಾಟ ಕೂಡ ರದ್ದಾಗಿದೆ.
ಈ ನಡುವೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಹಾರಾಟ ನಿರ್ಬಂಧಿಸಲಾಗಿದೆ. ಹೀಗಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಪ್ರಯಾಣಿಕರು ಈ ಬಗ್ಗೆ ಪರಿಶೀಲನೆ ಮಡಿ ವಿಮನ ಪ್ರಯಾಣ ಖಚಿತಪಡಿಸಿಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಈ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಮನವಿ ಮಾಡಿದೆ.