HomeLatest NewsBIG NEWS: ಪ್ರಯಾಣಿಕರಿಗೆ ಸೂಚನೆ: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆ:...

BIG NEWS: ಪ್ರಯಾಣಿಕರಿಗೆ ಸೂಚನೆ: ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆ: ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ

ಮಂಗಳೂರು: ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಸಂಚಾರ ಬಂದ್ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಉಗ್ರರು ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿಪಡೆದ ಕೃತ್ಯಕ್ಕೆ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಹಾರಾಟ ನಿರ್ಬಂಧಿಸಲಾಗಿದೆ. ಅಲ್ಲದೇ ಹಲವು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದ್ದು, ವಿಮಾನ ಹಾರಾಟ ಕೂಡ ರದ್ದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆಯಲ್ಲಿ ಕೆಲ ವಾಯು ಮಾರ್ಗಗಳಲ್ಲಿ ವಿಮಾನ ಹಾರಾಟ ನಿರ್ಬಂಧಿಸಲಾಗಿದೆ. ಹೀಗಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಪ್ರಯಾಣಿಕರು ಈ ಬಗ್ಗೆ ಪರಿಶೀಲನೆ ಮಡಿ ವಿಮನ ಪ್ರಯಾಣ ಖಚಿತಪಡಿಸಿಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಈ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಮನವಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular