HomeLatest NewsBREAKING : ಮಂಗಳೂರಿನಲ್ಲಿ ಘೋರ ದುರಂತ : ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು...

BREAKING : ಮಂಗಳೂರಿನಲ್ಲಿ ಘೋರ ದುರಂತ : ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು!

ಮಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದಿದೆ.

ಕುತ್ತಾರು ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಟ್ಟಡದಿಂದ ಬಿದ್ದು ವೈದ್ಯ ದಂಪತಿಯ ಪುತ್ರಿ ಹಿಬಾ ಐಮನ್ (15) ಸಾವನ್ನಪ್ಪಿದ್ದಾಳೆ.

ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ವೈದ್ಯ ದಂಪತಿ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್ ನ 12ನೇ ಮಹಡಿಯಲ್ಲಿ ವಾಸವಾಗಿದ್ದರು. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular