HomeKarnatakaಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ: ಆರೋಪಿ ಅರೆಸ್ಟ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ: ಆರೋಪಿ ಅರೆಸ್ಟ್

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. ರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಆರೋಪಿ ಶ್ರೀಕಾಂತ್ 2025ರ ಸೆಪ್ಟೆಂಬರ್‌ನಿಂದ ನವೆಂಬರ್ ಅವಧಿಯಲ್ಲಿ ಅತ್ಯಾಚಾರವೆಸಗಿದ್ದ. ಅಲ್ಲದೇ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆಕೆಗೆ ಪ್ರಾಣ ಬೆದರಿಕೆ ಒಡ್ಡಿದ್ದನು. ಘಟನೆಯಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದು, ಇತ್ತೀಚೆಗೆ ಮಗುವಿಗೂ ಜನ್ಮ ನೀಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಸಂತ್ರಸ್ತೆಯ ಕಡೆಯಿಂದ ದೂರು ದಾಖಲಾಗಿದ್ದು, ದಿನಾಂಕ 23.08.2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಹಾಗೂ ಪೋಕ್ಸೋ ಕಾಯ್ದೆಯ ಕಲಂ 4(2), 6ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಕೇಸ್ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ಶ್ರೀಕಾಂತ್, ದೊಡ್ಡಬಳ್ಳಾಪುರದಲ್ಲಿ ಅಡಗಿದ್ದ. ಧರ್ಮಸ್ಥಳ ಠಾಣಾ ಪಿಎಸ್ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ಪೊಲೀಸ್ ತಂಡವು, ಕಾರ್ಯಾಚರಣೆ ನಡೆಸಿ, ದೊಡ್ಡಬಳ್ಳಾಪುರದಲ್ಲಿ ಆರೋಪಿಯನ್ನು ಬಂಧಿಸಿದೆ.

ಬಂಧಿತ ಆರೋಪಿ ಶ್ರೀಕಾಂತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular