HomeLatest NewsBREAKING: ಮಂಗಳೂರಿನಲ್ಲಿ ಮತ್ತೊಂದು ದುರಂತ: ಸಮುದ್ರದಲ್ಲಿ ನಾಡದೋಣಿ ಪಲ್ಟಿ: ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು ಮೀನುಗಾರರು...

BREAKING: ಮಂಗಳೂರಿನಲ್ಲಿ ಮತ್ತೊಂದು ದುರಂತ: ಸಮುದ್ರದಲ್ಲಿ ನಾಡದೋಣಿ ಪಲ್ಟಿ: ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು ಮೀನುಗಾರರು ನಾಪತ್ತೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಭಾರಿ ಮಳೆ, ಕಡಲ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಪಲ್ಟಿಯಾಗಿದ್ದು, ಇಬ್ಬರು ಮೀನುಗಾರರು ಸಮುದ್ರಪಾಲಾಗಿರುವ ಘಟನೆ ನಡೆದಿದೆ.

ಮಂಗಳೂರಿನ ತೋಟಬೆಂಗ್ರೆ ಅಳಿವೆ ಬಾಗಿಲುವಿನಲ್ಲಿ ಈ ದುರಂತ ಸಂಭವಿಸಿದೆ. ಯಶವಂತ ಹಾಗೂ ಕಮಲಾಕ್ಷ ನೀರುಪಾಲಾಗಿರುವ ಮೀನುಗಾರರು. ದಕ್ಷಿಣ ಕನ್ನಡ ಜಿಲ್ಲಾಡಳಿತ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾಗ್ಯೂ ಸಹ ಮೀನುಗಾರಿಕೆಗೆಂದು ಇಬ್ಬರು ಹೋಗಿದ್ದರು. ಈ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ನಾಡದೋಣಿ ಪಲ್ಟಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಡದೋಣಿಯ ಅವಶೇಷಗಳು ಕಡಲತೀರಕ್ಕೆ ಬಂದು ಬಿದ್ದಿದೆ. ಆದರೆ ಇಬ್ಬರು ಮೀನುಗಾರರು ನಾಪತ್ತೆಯಾಗಿದ್ದು, ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular