HomeLatest NewsBIG NEWS: ಜಪ್ಪಿಮೊಗರು ಬಳಿ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಸೇರಿ ಇಬ್ಬರು ಸಾವು ಪ್ರಕರಣ:...

BIG NEWS: ಜಪ್ಪಿಮೊಗರು ಬಳಿ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಸೇರಿ ಇಬ್ಬರು ಸಾವು ಪ್ರಕರಣ: ಅಪಘಾತಕ್ಕೆ ಕಾರಣ ಪತ್ತೆ

ಮಂಗಳೂರು: ಮಂಗಳೂರಿನ ಜಪ್ಪಿಮೊಗರು ಬಳಿ ಕಾರು ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಪತ್ತೆಯಾಗಿದೆ.

ಅಪಘಾತದಲ್ಲಿ ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಸಾವನ್ನಪ್ಪಿದ್ದಾರು. ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಜೂನ್ 17ರಂದು ರಾತ್ರಿ ಈ ಅಪಘಾತ ಸಂಭವಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಓಡಿಸಿದ್ದೇ ಅಪಘಾತಕ್ಕೆ ಕರಣ ಎಂದು ತಿಳಿದುಬಂದಿದೆ. ಮಧ್ಯರಾತ್ರಿವರೆಗೆ ಎಣ್ಣೆ ಪಾರ್ಟಿ ಮಾಡಿದ್ದ ಐವರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿಗೆ ಬಂದಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿ.ಮೀ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular