HomeLatest NewsBREAKING NEWS: ಚರಂಡಿ ಗೋಡೆಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

BREAKING NEWS: ಚರಂಡಿ ಗೋಡೆಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಮಂಗಳೂರು: ಚರಂಡಿ ಗೋಡೆಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಜಪ್ಪಿನಮೊಗರು ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ NSUI ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕದ್ರಿ ನಿವಾಸಿ ಓಂಶ್ರೀ ಪೂಜಾರಿ, ಅಮನ್ ರಾವ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ., ತಲಪಾಡಿಯಿಂದ ಮಂಗಳೂರುಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular