HomeKarnatakaBIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ;...

BIG NEWS: ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣ: ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ; ನಾಲ್ಕು ಜಿಲ್ಲೆಗಳಲ್ಲಿ ನಾಕಾಬಂಧಿ ಹಾಕುವಂತೆ ಸೂಚನೆ

ಮಂಗಳೂರು: ಮಂಗಳೂರಿನ ಕೋಟೆಕರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿದ್ದಾಗಲೇ ಈ ಘಟನೆ ನಡೆದಿದ್ದು, ದರೋಡೆ ಪ್ರಕರಣದ ಬಳಿಕ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಶೀಘ್ರವಾಗಿ ಆರೋಪಿಗಳ ಪತ್ತೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದರು. ಪೊಲೀಸರಿದ್ದೂ ಯಾಕೆ ಹೀಗಾಯ್ತು? ಆರೋಪಿಗಳು ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಸಿಎಂ ಸೂಚನೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular