HomeKarnatakaಮಂಗಳೂರಿನ 7 ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರಿನ 7 ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯ ಏಳು ಗ್ರಾಮ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ವಿವಿಧ ತಾಲೂಕುಗಳ ಒಟ್ಟು 7 ಗ್ರಾಮ ಪಂಚಾಯತಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರಿಂದ ಸರಣಿ ಭ್ರಷ್ಟಾಚಾರ, ಖಾತಾ ಬದಲಾವಣೆ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಕೆಲಸಗಳಲ್ಲಿ ಅಕ್ರಮ ಮತ್ತು ಲಂಚದ ಬೇಡಿಕೆ ಕುರಿತು ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ.

ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತಿ, ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ, ಮಾಣಿ ಗ್ರಾಮ ಪಂಚಾಯತಿ, ಗೊಳ್ತಮಜಲು ಗ್ರಾಮ ಪಂಚಾಯತಿ, ಪಾಣೆಮಂಗಳೂರು, ಅಡ್ಯಾರ್ ಗ್ರಾಮ ಪಂಚಾಯತಿ, ಕುವೆಟ್ಟು ಗ್ರಾಮ ಪಂಚಾಯತಿ, ಮಡಂತ್ಯಾರ್ ಗ್ರಾಮ ಪಂಚಾಯತಿ, ಕಾರವಾರ, ಉಡುಪಿ ಹಾಗೂ ಮಂಗಳೂರು ವಿಭಾಗಗಳ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ದಾಳಿ ನಡೆಸಲಾಗಿದೆ.

ಕಚೇರಿಯಲ್ಲಿದ್ದ ಪ್ರಮುಖ ಕಡತಗಳು, ಸಾರ್ವಜನಿಕರ ಅರ್ಜಿ ವಿಲೇವಾರಿ ರಿಜಿಸ್ಟರ್‌, ತೆರಿಗೆ ವಸೂಲಾತಿ, ನಿರ್ಮಾಣ ಪರವಾನಗಿ ಹಾಗೂ ೧೫ನೇ ಹಣಕಾಸು ಯೋಜನೆಗಳ ಅನುದಾನ ಬಳಕೆಯ ಕಡತಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ.

ಸಾರ್ವಜನಿಕರಿಂದ ಸಾಲು ಸಾಲು ದೂರು ಬರುತ್ತಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಈ ಬಗ್ಗೆ ಪಂಚಾಯತ್ ಅಧಿಕಾರಿ, ಸಿಬ್ಬಂದಿಗಳಿಂದ ವಿಚಾರಿಸಿ ಮಾಹಿತಿ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular