ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಆರೋಪಿಗಳ ಮೇಲೆ ಪೊಲೀಸರ ತೀವ್ರ ನಿಗಾ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಅಪರಾಧ ಕೃತ್ಯಗಳು ಮರುಕಳಿಸದಂತೆ ಆರೋಪಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.

5 ವರ್ಷಗಳಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾದವರನ್ನು ಗುರುತಿಸಿ ಸಿ ಆರ್ ಇ ಸಿ ಸೆಕ್ಷನ್ 107 ಹಾಗೂ 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.

ಈ ಹಿಂದೆ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿದ್ದ 1200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ 1 ವರ್ಷದವರೆಗೆ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುತ್ತದೆ. ಒಂದು ವೇಳೆ ಮುಚ್ಚಳಿಕೆ ನಿಯಮ ಉಲ್ಲಂಘನೆ ಮಾಡಿದರೆ ಜಾಮೀನು ಮೊತ್ತ ಮುಟ್ಟುಗೋಲು ಹಾಕಿಕೊಂಡು ಮತ್ತೊಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read