ಮಂಗಳೂರು: ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಬಿರುಗಾಳಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಬಿರುಗಾಳಿ ಮಳೆಯಿಂದಾಗಿ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಕಾರವಾರದಲ್ಲಿ ಗಾಳಿ ಮಳೆಯ ಪರಿಣಾಮ ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರು. ಈ ಘಟನೆ ಮಾಸುವ ಮುನ್ನವೇ ಇದೀಗ ಇಂತದ್ದೇ ಮತ್ತೊಂದು ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.
ಭಾರಿ ಗಾಳಿಯಿಂದಾಗಿ ಮಹಿಳೆಯ ಮೇಲೆಯೇ ಮರಬಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಚಿತ್ರಪ್ಪಾಡಿಯಲ್ಲಿ ಈ ದುರಂತ ಸಂಭವಿಸಿದೆ. ರುಕ್ಮಿಣಿ (62) ಮೃತ ಮಹಿಳೆ. ಮನೆಯಲ್ಲಿ ಒಬ್ಬರೇ ಇದ್ದರು. ಮನೆಯ ಹೊರಗಡೆ ಮುಂಜಾನೆ ಕೆಲಸ ಮಾಡುತ್ತಿದ್ದಾಗ ಮರ ಬಿದ್ದು ಮರದ ಕೆಳಗೆ ಸಿಲುಕಿ ರುಕ್ಮುಣಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.