HomeKarnatakaBIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದೆ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಪತ್ನಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ತೆರಳಿ ಪತಿ ವಿರುದ್ಧ ದೂರು ನೀಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ಜಗಳ ಮಾಡುತ್ತಿದ್ದು, ನನ್ನನ್ನು ಹಾಗೂ ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಪೊಲೀಸರ ಬಳಿ ಅಳಲು ತೋಡಿಕೊಂಡಿದ್ದಾಳೆ. ಈ ವೇಳೆ ಪೊಲೀಸರು ಸಿಬ್ಬಂದಿಯೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಪತಿ ಹಾಗೂ ಇಬ್ಬರು ಮಕ್ಕಳನ್ನು ಠಾಣೆಗೆ ಕರೆತಂದಿದ್ದಾರೆ.

ಪೊಲೀಸ್ ಠಾಣೆಗೆ ಬಂದ ಪತಿ ತನ್ನ ವಿರುದ್ಧವೇ ದೂರು ನೀಡುತ್ತೀಯಾ ಎಂದು ಪತ್ನಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅಲ್ಲದೇ ಪೊಲೀಸರ ಎದುರೇ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದೇ ವೇಳೆ ಒಂದುವರೆ ವರ್ಷದ ಪುಟ್ಟ ಮಗುವನ್ನು ನೆಲಕ್ಕೆಸೆದು ಹಲ್ಲೆ ನಡೆಸಿದ್ದಾನೆ. ಮಗುವಿನ ಕುತ್ತಿಗೆ, ತಲೆಯ ಭಾಗಕ್ಕೆ ಗಾಯಗಳಾಗಿವೆ.

ಮಹಿಳೆಯ ಪತಿ ಮಹೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular