HomeKarnatakaBIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

BIG NEWS: ಸ್ವಧರ್ಮಿಯ ಯುವಕರಿಂದಲೇ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಥಳಿತ; ಓರ್ವ ಆರೋಪಿ ಬಂಧನ

ಮಂಗಳೂರು: ಸ್ವಧರ್ಮೀಯ ಯುವಕರಿಂದಲೇ ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಖಾಸಗಿ ಕಾಲೇಜಿನ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿ ಅಡ್ಯಾರ್ ಬಳಿಯ ಫ್ಲ್ಯಾಟ್ ನಲ್ಲಿ ಥಳಿಸಿದ್ದಾರೆ. ಹುಡುಗಿಯ ವಿಚಾರವಾಗಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ರಾಹಿಂ ಫಾಹಿಂ ಥಳಿತಕ್ಕೊಳಗಾದ ವಿದ್ಯಾರ್ಥಿ. ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿಯನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಮಂಗಳೂರು ಬಂದರು ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular